
ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಛತ್ರಸಾಲಾಲ ಸ್ಟೇಡಿಯಂನಲ್ಲಿ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಆರೋಪಿತರಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿ ಕೋರ್ಟ್ ಗೆ ಜಾಮೀನು ಕೋರಿ ಸುಶೀಲ್ ಕುಮಾರ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಸಿದ ಒಂದು ದಿನದ ನಂತರದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಅಂತರಾಷ್ಟ್ರೀಯ ಮಾಜಿ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿದ್ದಾರೆ ಎನ್ನುವ ಆರೋಪ ಇದೆ. ಬಂಧನಕ್ಕೆ ಹೆದರಿ ಅವರು ರೋಹಿಣಿ ನ್ಯಾಯಾಲಯದಲ್ಲಿ ಮೇ 17 ರಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ತಿರಸ್ಕರಿಸಲಾಗಿದೆ.
ಮೇ 4 ರಂದು ಛತ್ರಸಾಲಾ ಕ್ರೀಡಾಂಗಣ ಆವರಣದಲ್ಲಿ ನಡೆದ ಘರ್ಷಣೆಯಲ್ಲಿ ಕುಸ್ತಿಪಟು ಸಾಗರ್ ರಾಣಾ ಮೃತಪಟ್ಟು ಅವರ ಸ್ನೇಹಿತರು ಗಾಯಗೊಂಡಿದ್ದರು.