ಅಬುಧಾಬಿ: ಟಿ20 ಯಲ್ಲಿ ಕ್ರಿಸ್ ಗೇಲ್ ಈವರೆಗೆ ಬರೋಬ್ಬರಿ ಒಂದು ಸಾವಿರ ಸಿಕ್ಸರ್ ಸಿಡಿಸಿದ್ದು ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
410 ಟಿ20 ಪಂದ್ಯಗಳನ್ನಾಡಿರುವ ಅವರು 13,572 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕ, 85 ಅರ್ಧಶತಕ ಸೇರಿವೆ. 1041 ಬೌಂಡರಿ, 1001 ಸಿಕ್ಟರ್ ಸಿಡಿಸಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1000 ಸಿಕ್ಸರ್ ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಗೇಲ್ ಪಾತ್ರರಾಗಿದ್ದಾರೆ.
ಪ್ರಸಕ್ತ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿರುವ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 99 ರನ್ ಗಳಿಸಿದ್ದಾರೆ.
ವೆಸ್ಟ್ ಇಂಡೀಸ್ ನ ಕಿರನ್ ಪೊಲಾರ್ಡ್ ಟಿ20 ಎಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 690 ಸಿಕ್ಸರ್ ಸಿಡಿಸಿದ್ದು, ನ್ಯೂಜಿಲೆಂಡ್ ನ ಬ್ರೆಂಡನ್ ಮೆಕಲಂ 485 ಸಿಕ್ಸರ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.