ಐಪಿಎಲ್ ನಲ್ಲಿ ಕ್ರಿಸ್ ಗೇಲ್ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 350 ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ಸ್ ಮನ್ ಎನ್ನುವ ಹೆಗ್ಗಳಿಕೆಗೆ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ.
ಕ್ರಿಸ್ ಗೇಲ್ 350 ಸಿಕ್ಸರ್ ಬಾರಿಸಿದ ಏಕೈಕ ಆಟಗಾರರಾಗಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1009 ಸಿಕ್ಸರ್ ಸಿಡಿಸಿದ್ದಾರೆ. ಐಪಿಎಲ್ ನಲ್ಲಿ 351 ಸಿಕ್ಸರ್ ಬಾರಿಸಿರುವ ಅವರು ಐಪಿಎಲ್ ನಲ್ಲಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಆರ್ಸಿಬಿ ತಂಡದ ಎಬಿ ಡಿವಿಲಿಯರ್ಸ್ 237 ಸಿಕ್ಸರ್ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ಎಂಎಸ್ ಧೋನಿ 216 ಸಿಕ್ಸರ್ ಸಿಡಿಸಿದ್ದಾರೆ. 4ನೇ ಸ್ಥಾನದಲ್ಲಿ ರೋಹಿತ್ ಶರ್ಮಾ 214 ಸಿಕ್ಸರ್, 5ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 201 ಸಿಕ್ಸರ್ ಬಾರಿಸಿದ್ದಾರೆ.