ಬೆಂಗಳೂರು: ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆಯ ಉದ್ಯೋಗಗಳಲ್ಲಿ ಶೇಕಡ 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪೊಲೀಸ್, ಅರಣ್ಯ, ಆರೋಗ್ಯ ಇಲಾಖೆ ಮತ್ತು ಸರ್ಕಾರದ ವಿವಿಧ ಇಲಾಖೆ ಹಾಗೂ ನಿಗಮಗಳಲ್ಲಿಯೂ ನೇರ ನೇಮಕಾತಿಯಲ್ಲಿ 2 ರಷ್ಟು ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ನೇರ ನೇಮಕಾತಿ ಅವಕಾಶ ನೀಡಲು ಕ್ರಮ ಕೈಗೊಳ್ಳುವ ಮೂಲಕ ಕ್ರೀಡೆಯ ಬೆಳವಣಿಗೆಗೆ ಮತ್ತು ಕ್ರೀಡಾಪಟುಗಳ ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದಾಗಿ ತಿಳಿಸಿದ್ದಾರೆ. ಕರ್ನಾಟಕ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಹಾಲ್ ಆಫ್ ಫೇಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳ ನೇರ ನೇಮಕಾತಿ ಮೂಲಕ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗುವುದು. ಶೀಘ್ರದಲ್ಲಿ ಈ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.