ಬೆಂಗಳೂರು: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸಿದ್ದಾರೆ.
ನೀರಜ್ ಚಿನ್ನದ ಪದಕ ಪಡೆಯುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣ ಪದಕ ಗಳಿಸಿದ್ದಾರೆ. ಅವರ ಸಾಧನೆಗೆ ಕಾಶಿನಾಥ್ ಬೆನ್ನೆಲುಬಾಗಿದ್ದು, ಅವರಿಗೆ ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ ವತಿಯಿಂದ ನೀರಜ್ ಕೋಚ್ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು. ಚಿನ್ನದ ಪದಕ ಗಳಿಸುವಲ್ಲಿ ಕನ್ನಡಿಗ ಕಾಶಿನಾಥ್ ನ ಪಾತ್ರವೂ ಇದೆ. ಹೀಗಾಗಿ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಹೇಳಲಾಗಿದೆ.