ನವದೆಹಲಿ: ವಿದೇಶದಲ್ಲಿ ಐಪಿಎಲ್ ಆಯೋಜನೆ ಮಾಡಲು ಬಿಸಿಸಿಐ ಪರಿಶೀಲನೆ ನಡೆಸಿದೆ. ಭಾರತದಲ್ಲಿ ಕೊರೊನಾ ಸೋಂಕು ಹತೋಟಿಗೆ ಬರದಿದ್ದರೆ ವಿದೇಶದಲ್ಲಿ ಈ ವರ್ಷದ ಐಪಿಎಲ್ 13ನೇ ಆವೃತ್ತಿಯನ್ನು ನಡೆಸಲಾಗುವುದು.
ಐಪಿಎಲ್ ಆಯೋಜಿಸದಿದ್ದರೆ ಸುಮಾರು 4 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತದೆ. ನಷ್ಟವನ್ನು ತಪ್ಪಿಸುವ ಉದ್ದೇಶದಿಂದ ಬಿಸಿಸಿಐ, ಐಪಿಎಲ್ ಆಯೋಜಿಸುವ ವಿಧಾನಗಳ ಕುರಿತಾಗಿ ಪರಿಶೀಲನೆ ನಡೆಸಿದ್ದು ವಿದೇಶದಲ್ಲಿ ಐಪಿಎಲ್ ನಡೆಸಲು ಮುಂದಾಗಿದೆ ಎನ್ನಲಾಗಿದೆ.
ಈ ವರ್ಷದ ಐಪಿಎಲ್ ಟೂರ್ನಿ ನಡೆಸದಿದ್ದರೆ ಭಾರಿ ನಷ್ಟವಾಗಲಿರುವ ಹಿನ್ನೆಲೆಯಲ್ಲಿ ಮತ್ತು ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ವಿದೇಶದಲ್ಲಿ ಐಪಿಎಲ್ ಟೂರ್ನಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಹಿಂದೆಯೂ ವಿದೇಶದಲ್ಲಿ ಐಪಿಎಲ್ ಟೂರ್ನಿ ನಡೆಸಲಾಗಿದೆ. ಮತ್ತೊಮ್ಮೆ ವಿದೇಶದಲ್ಲಿ ನಡೆಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗಿದೆ ಎನ್ನಲಾಗಿದೆ.