ನವದೆಹಲಿ: ಪ್ರೇಕ್ಷಕರಿಲ್ಲದೆ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ ಕೈಗೊಂಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಖಾಲಿ ಮೈದಾನದಲ್ಲಿ ಐಪಿಎಲ್ ನಡೆಸಲು ಚಿಂತನೆ ನಡೆಸಿರುವ ಬಿಸಿಸಿಐ ರಾಜ್ಯ ಕ್ರಿಕೆಟ್ ಸಂಸ್ಥೆ ಗಳಿಗೆ ಮಾಹಿತಿ ಕೇಳಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಕುರಿತು ಮಾತನಾಡಿ, ಈ ವರ್ಷದ ಐಪಿಎಲ್ ಟೂರ್ನಿಯನ್ನು ನಡೆಸುವ ಕುರಿತಾದ ಎಲ್ಲ ಆಯ್ಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಅನಿರ್ದಿಷ್ಟಾವಧಿಗೆ ಐಪಿಎಲ್ ಮುಂದೂಡಿಕೆಯಾಗಿದ್ದು ಈ ವರ್ಷದ ಟೂರ್ನಿಯನ್ನು ಸೆಪ್ಟಂಬರ್ ನಲ್ಲಿ ಆಯೋಜಿಸಲು ಚಿಂತನೆ ನಡೆದಿದೆ.
ಟಿ20 ವಿಶ್ವಕಪ್ ಟೂರ್ನಿ ದಿನಾಂಕ ನಿರ್ಧಾರವಾದ ಪಡೆದ ಐಪಿಎಲ್ ಟೂರ್ನಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಹೇಳಿದ್ದು ಭಾರತದಲ್ಲಿ ಐಪಿಎಲ್ ನಡೆಸಲು ಆಗದಿದ್ದರೆ ವಿದೇಶದಲ್ಲಿ ನಡೆಸುವ ಚಿಂತನೆ ಕೂಡ ಇದೆ. ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್ ಟೂರ್ನಿ ನಡೆಸಲಾಗುವುದು ಎಂದು ಹೇಳಲಾಗಿದೆ.