ಐಪಿಎಲ್ ಶುರುವಾಗಲು ಇನ್ನೇನು ಕೆಲವೇ ದಿನಗಳ ಬಾಕಿಯಿದೆ. ಐಪಿಎಲ್ ಗೆ ಎಲ್ಲ ತಂಡಗಳು ತಯಾರಿ ನಡೆಸುತ್ತಿವೆ. ಮೊದಲ ಪಂದ್ಯ ಏಪ್ರಿಲ್ 9ರಂದು ಚೆನ್ನೈನಲ್ಲಿ ನಡೆಯಲಿದೆ. ಈ ಮಧ್ಯೆ ಕೊರೊನಾ ಭಯ ಎಲ್ಲರನ್ನು ಆವರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೆಲಸ ಮಾಡುವ 8 ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ ನ 10 ಪಂದ್ಯಗಳು ನಡೆಯಲಿವೆ. ಮುಂಬೈನಲ್ಲಿ ಏಪ್ರಿಲ್ 10ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿದೆ. ಇದು ಬಿಸಿಸಿಐಗೆ ತಲೆನೋವು ತಂದಿದೆ. ಇನ್ನಷ್ಟು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಗ್ರೌಂಡ್ ಸ್ಟಾಪ್ ಗಳನ್ನು ಒಂದೇ ಸ್ಥಳದಲ್ಲಿ ಇರಿಸಲು ಚಿಂತನೆ ನಡೆಸಲಾಗ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಅತಿ ಹೆಚ್ಚಿದೆ. ಶುಕ್ರವಾರ ರಾಜ್ಯದಲ್ಲಿ 47,827 ಹೊಸ ಪ್ರಕರಣ ದಾಖಲಾಗಿದೆ. 202 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿಯವರೆಗೆ ರಾಜ್ಯದಲ್ಲಿ ಒಟ್ಟೂ ಸಕ್ರಿಯ ಪ್ರಕರಣ 3,89,832ಕ್ಕೆ ಏರಿದೆ.