88 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಅತಿ ಕಡಿಮೆ ಅಂದರೆ 36 ರನ್ಗಳಿಗೆ 9 ವಿಕೆಟ್ಗಳನ್ನ ಕಳೆದುಕೊಂಡು ಡಿಕ್ಲೇರ್ ಮಾಡಿಕೊಳ್ಳುವ ಮೂಲಕ ಕಳಪೆ ಪ್ರದರ್ಶನ ತೋರಿದೆ. 1974ರಲ್ಲಿ ಇಂಗ್ಲೆಂಡ್ ವಿರುದ್ಧ 42 ರನ್ ಗಳಿಸಿದ ಬಳಿಕ ಇದೇ ಭಾರತದ ಅತ್ಯಂತ ಕಡಿಮೆ ಸ್ಕೋರ್ ಆಗಿದೆ.
ಅಡಿಲೇಡ್ ಅಂಗಳದಲ್ಲಿ ಕಾಂಗರೂಗಳ ದಾಳಿಗೆ ಧೂಳೀಪಟವಾದ ಟೀಂ ಇಂಡಿಯಾ ಪಂದ್ಯ ಮುಕ್ತಾಯಕ್ಕೆ ಇನ್ನು ಮೂರು ದಿನ ಬಾಕಿ ಇದೆ ಅನ್ನೋವಾಗಲೇ ಆಸ್ಟ್ರೇಲಿಯಾ ವಿರುದ್ಧ ಶರಣಾಗಿದೆ. ಈ ಮೂಲಕ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಮೊದಲೇ ಆಸ್ಟ್ರೇಲಿಯಾ ದಾಳಿಯಿಂದ ಕಂಗೆಟ್ಟಿದ್ದ ಟೀಂ ಇಂಡಿಯಾಗೆ ಹೇಝಲ್ವುಡ್ ಐದು ವಿಕೆಟ್ಗಳನ್ನ ಪಡೆಯುವಲ್ಲಿ ಯಶಸ್ವಿಯಾದ್ರು. ಆಸ್ಟ್ರೇಲಿಯಾದ ಮತ್ತೊಬ್ಬ ಆಟಗಾರ ಪ್ಯಾಟ್ ಕಮಿನ್ಸ್ ಕೇವಲ 21 ರನ್ಗಳನ್ನ ನೀಡಿ ನಾಲ್ಕು ವಿಕೆಟ್ಗಳನ್ನ ಕಬಳಿಸಿದ್ರು.
90 ರನ್ಗಳ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾ ಕೇವಲ 2 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿ ಗೆಲುವಿನ ನಗೆ ಬೀರಿತು. 1947ರಲ್ಲಿ ಬ್ರಿಸ್ಬಾನೆಯಲ್ಲಿ ನಡೆದ ಪಂದ್ಯದಲ್ಲೂ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಕೇವಲ 58 ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು.