alex Certify ಚೆಕ್ ಬೌನ್ಸ್ ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೆಕ್ ಬೌನ್ಸ್ ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಉಡುಪಿ: ಚೆಕ್ ಬೌನ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಬದ್ರುದ್ದೀನ್ ಅಲಿಯಾಸ್ ಫಿರೋಜ್ ಎಂಬಾತನನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಮುಂಬೈ ನ್ಯಾಯಾಲಯದಲ್ಲಿ ಶಿಕ್ಷೆ ಗುರಿಯಾಗಿದ್ದ ಬದ್ರುದ್ದೀನ್ ಕಾರ್ಕಳದಲ್ಲಿ ತಲೆ ಮರೆಸಿಕೊಂಡಿದ್ದ. ಕಾರ್ಕಳದ ಹಂಚಿಕಟ್ಟೆ ನಿವಾಸಿಯಾಗಿರುವ ಬದ್ರುದ್ದೀನ್ ವಿರುದ್ಧ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ಚೆಕ್ ಅಮಾನ್ಯ ವಂಚನೆ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಬದ್ರುದ್ದೀನ್ ಅಪರಾಧಿ ಎಂದು ತೀರ್ಪು ನೀಡಿದೆ. ನ್ಯಾಯಾಲಯಕ್ಕೆ ಹಾಜರಾಗದೇ ಬದ್ರುದ್ದೀನ್ ತಲೆ ಮರೆಸಿಕೊಂಡಿದ್ದು, ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಕಾರ್ಕಳ ನಗರ ಠಾಣೆ ಪೋಲಿಸರು ಸೋಮವಾರ ರಾತ್ರಿ ಆತನನ್ನು ಬಂಧಿಸಿ ಮುಂಬೈಗೆ ಕರೆದುಕೊಂಡುಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...