alex Certify 27 ಶತಕ ಸಿಡಿಸಿದ ಯುವ ಕ್ರಿಕೆಟಿಗನಿಗೆ ಭರ್ಜರಿ ಗೆಲುವು: ಟಿಎಂಸಿ ಅಭ್ಯರ್ಥಿಯಾಗಿದ್ದ ಮನೋಜ್ ತಿವಾರಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

27 ಶತಕ ಸಿಡಿಸಿದ ಯುವ ಕ್ರಿಕೆಟಿಗನಿಗೆ ಭರ್ಜರಿ ಗೆಲುವು: ಟಿಎಂಸಿ ಅಭ್ಯರ್ಥಿಯಾಗಿದ್ದ ಮನೋಜ್ ತಿವಾರಿ ಶಾಸಕ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಭರ್ಜರಿ ಜಯಗಳಿಸಿದ್ದಾರೆ.

36 ವರ್ಷದ ಮನೋಜ್ ತಿವಾರಿ ಶಿಬ್ ಪುರ ಕ್ಷೇತ್ರದಿಂದ ಭರ್ಜರಿ ಜಯ ಗಳಿಸಿದ್ದಾರೆ. ಟಿಎಂಸಿ ಅಭ್ಯರ್ಥಿ ಮನೋಜ್ ತಿವಾರಿ ಕೊಲ್ಕೊತ್ತಾದ ಹೌರ ಜಿಲ್ಲೆಯ ಶಿಬ್ ಪುರ ಕ್ಷೇತ್ರದಲ್ಲಿ ಬಿಜೆಪಿಯ ರತೀಂದ್ರನಾಥ್ ಚಕ್ರವರ್ತಿ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಅವರು ಟೀಂ ಇಂಡಿಯಾ ಪರವಾಗಿ 12 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಿದ್ದಾರೆ. 125 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಪ್ರತಿನಿಧಿಸಿ 27 ಶತಕ, 8965 ರನ್ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...