ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಪಡೆದುಕೊಂಡಿದ್ದಾರೆ.
2004ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಅವರು 15 ವರ್ಷಗಳ ಕರಿಯರ್ ನಲ್ಲಿ 699 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ 439, ಏಕದಿನ ಪಂದ್ಯಗಳಲ್ಲಿ 169 ವಿಕೆಟ್ ಪಡೆದಿದ್ದಾರೆ. ಟಿ20 ಪಂದ್ಯಗಳಲ್ಲಿ 64 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. 2021 ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು.
ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ ಮಂಗಳವಾರ ಎಲ್ಲಾ ಪ್ರಕಾರದ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಅವರು 93 ಟೆಸ್ಟ್ ಗಳು, 125 ಏಕದಿನ ಮತ್ತು 47 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.