alex Certify ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ಬೆಂಗಳೂರು: ರಾಜ್ಯದ ಕುಸ್ತಿಪಟುಗಳಿಗೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವುದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘೋಷಿಸಿದ್ದಾರೆ.

ಸಂಕ್ರಾಂತಿ ಹಿನ್ನೆಲೆಯಲ್ಲಿ ಬಸವಣ್ಣ ದೇವಾಲಯ ಸೇವಾ ಸಮಿತಿ ಸೋಂಪುರದ ಬಸವೇಶ್ವರ ದೇವಾಲಯ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಸ್ತಿಪಟುಗಳಿಗೆ ನೆರವು ನೀಡಲು ಬದ್ಧವಾಗಿದ್ದೇನೆ. ರಾಜ್ಯದಲ್ಲಿರುವ ಕುಸ್ತಿಪಟುಗಳನ್ನು ಗುರುತಿಸಬೇಕು ಎಂದು ಹೇಳಿದ ಅವರು, ಕುಸ್ತಿ ಪಂದ್ಯಾವಳಿಯಲ್ಲಿ ಸ್ನೇಹಿತ ವಿಕ್ರಂ ಕಾಟೆ ಪ್ರಶಸ್ತಿ ಗೆದ್ದಿರುವುದು ಸಂತಸ ತಂದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ನಟ ಚಿಕ್ಕಣ್ಣ, ಎಂ. ರುದ್ರೇಶ್ ಮೊದಲಾದವರು ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...