ದುಬೈ: ರುತುರಾಜ್ ಗಾಯಕ್ವಾಡ್ ಮತ್ತು ರಾಬಿನ್ ಉತ್ತಪ್ಪ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಮೊದಲ ಕಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ಜಯಗಳಿಸಿದ್ದು, 9ನೇ ಬಾರಿಗೆ ಐಪಿಎಲ್ ಫೈನಲ್ ಗೆ ಎಂಟ್ರಿ ಕೊಟ್ಟಿದೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರುಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು. ಗೆಲುವಿನ ಗುರಿ ಬೆನ್ನತ್ತಿದ್ದ ಚೆನ್ನೈ ತಂಡ 2 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ 9ನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದ ಧೋನಿ ಬಳಗ ದಾಖಲೆ ಬರೆದಿದೆ.
ಡೆಲ್ಲಿ ಪರವಾಗಿ ಪೃಥ್ವಿ ಶಾ 60, ರಿಷಬ್ ಪಂತ್ ಅಜೇಯ 51 ಮತ್ತು ಶಿಮ್ರೊನ್ 37 ರನ್ ಗಳಿಸಿದರು. ಚೆನ್ನೈ ತಂಡದ ಪರವಾಗಿ ರುತುರಾಜ್(70 ರನ್, 50 ಎಸೆತ, 5 ಬೌಂಡರಿ, 2 ಸಿಕ್ಟರ್), ರಾಬಿನ್ ಉತ್ತಪ್ಪ(63 ರನ್, 44 ಎಸೆತ, 7 ಬೌಂಡರಿ, 2 ಸಿಕ್ಸರ್), ಧೋನಿ(ಅಜೇಯ 18 ರನ್, 6 ಎಸೆತ, 3 ಬೌಂಡರಿ, 1 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.