ಚಿಕ್ಕಮಗಳೂರು: ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ ಕುಸಿತುಬಿದ್ದು ಪಶು ವೈದ್ಯರೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಕ್ರೀಡಾಂಗಣದಲ್ಲಿ ನಡೆದಿದೆ.
56 ವರ್ಷದ ಶಿವಪ್ಪ ಬಾದಾಮಿ ಮೃತಪಟ್ಟವರು. ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಮೈಸೂರು ವಿಭಾಗ ಮಟ್ಟದ ಪಶು ವೈದ್ಯರ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಕ್ರೀಡಾಕೂಟ ಆರಂಭವಾಗಿದ್ದು, ಕ್ರಿಕೆಟ್ ಆಡಿ ಫೋಟೋ ಸೆಷನ್ ನಂತರ ಶಿವಪ್ಪ ಬಾದಾಮಿ ಕುಸಿದು ಬಿದ್ದಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.