ಮಡಿಕೇರಿ: ಹಾಕಿ ಆಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಆಟಗಾರ ಮೃತಪಟ್ಟ ಘಟನೆ ಮೂರ್ನಾಡು ಗ್ರಾಮದಲ್ಲಿ ನಡೆದಿದೆ.
23 ವರ್ಷದ ತೊಟ್ಟಿಯಂಡ ಸೋಮಯ್ಯ ಮೃತಪಟ್ಟವರು ಎಂದು ಹೇಳಲಾಗಿದೆ. ಚೌರಿರ ಹಾಕಿ ಟೂರ್ನಿಯಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಏಕಾಏಕಿ ನಡೆದ ಘಟನೆಯಿಂದ ಕುಟುಂಬದವರು, ಸಂಘಟಕರು, ಕ್ರೀಡಾಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.