alex Certify ಕೆರೆಗೆ ಬಿದ್ದು ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಪಟು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಗೆ ಬಿದ್ದು ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸಮೀಪ ಘಟನೆ ನಡೆದಿದೆ.

ಪಾಂಡಿಚೆರಿಯ ಕ್ರೀಡಾಪಟು ಆಲ್ಹರ್ಷ್ ಕೆರೆಗೆ ಬಿದ್ದು ಮೃತಪಟ್ಟ ಸೈಕ್ಲಿಂಗ್ ಕ್ರೀಡಾಪಟು ಎಂದು ಹೇಳಲಾಗಿದೆ. ಬಹಿರ್ದೆಸೆಗೆ ಹೊರ ಹೋಗಿದ್ದಾಗ ಕೆರೆಗೆ ಜಾರಿ ಬಿದ್ದು ಅವರು ಸಾವು ಕಂಡಿದ್ದಾರೆ. ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದೇ ಘಟನೆಗೆ ಕಾರಣ ಎಂದು ಕ್ರೀಡಾ ಆಯೋಜಕರ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿಹೆಬ್ಬಾಳು ಬಳಿ ಸೈಕಲ್ ಪೋಲೋ ಕ್ರೀಡಾಕೂಟ ನಡೆಯುತ್ತಿದೆ. ಕ್ರೀಡಾಕೂಟದಲ್ಲಿ ಸೈಕ್ಲಿಂಗ್ ಕ್ರೀಡಾಪಟು ಅಲ್ಹರ್ಷ್ ಭಾಗಿಯಾಗಿದ್ದರು. ಕೆಆರ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...