ನವದೆಹಲಿ: ನವದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ನಡೆದಿದ್ದ ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರೆ 6 ಮಂದಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಛತ್ರಸಾಲ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದ ಗುಂಪು ಘರ್ಷಣೆಯಲ್ಲಿ 23 ವರ್ಷದ ಕುಸ್ತಿಪಟು ಸಾಗರ್ ರಾಣಾ ಮೃತಪಟ್ಟಿದ್ದರು. ಈ ಘರ್ಷಣೆಯಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ದೆಹಲಿ ಪೊಲೀಸರು ನಾಪತ್ತೆಯಾಗಿದ್ದ ಸುಶೀಲ್ ಕುಮಾರ್ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.
ಪೊಲೀಸರ ಜಾಮೀನು ರಹಿತ ವಾರಂಟ್ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.