alex Certify ಟಿ 20 ತಂಡದಲ್ಲಿ ಸಿಗದ ಸ್ಥಾನ: ದುಡುಕಿದ ಮಾಜಿ ಕ್ರಿಕೆಟಿಗ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ 20 ತಂಡದಲ್ಲಿ ಸಿಗದ ಸ್ಥಾನ: ದುಡುಕಿದ ಮಾಜಿ ಕ್ರಿಕೆಟಿಗ ಆತ್ಮಹತ್ಯೆ

ಢಾಕಾ: ಬಾಂಗ್ಲಾದೇಶದ 19 ವರ್ಷದೊಳಗಿನ ಕ್ರಿಕೆಟ್ ತಂಡದ ಮಾಜಿ ಆಟಗಾರ ಮೊಹಮ್ಮದ್ ಶಾಜಿಬ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದುರ್ಗಾಪುರದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದುರ್ಗಾಪುರ ಪೊಲೀಸ್ ಠಾಣೆ ಉಸ್ತುವಾರಿ ಹಶ್ಮೋತ್ ಅಲಿ ತಿಳಿಸಿದ್ದಾರೆ. ಟಿ -20 ಪಂದ್ಯಾವಳಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾದ ನಂತರ ಅವರು ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ.

2017 ರಲ್ಲಿ ಅಂಡರ್ 19 ಏಷ್ಯಾಕಪ್ ನಲ್ಲಿ ಬಾಂಗ್ಲಾದೇಶ ತಂಡವನ್ನು ಅವರು ಪ್ರತಿನಿಧಿಸಿದ್ದರು. 2018 ರಲ್ಲಿ ಅಂಡರ್ 19 ವಿಶ್ವಕಪ್ ನಲ್ಲಿ ಸ್ಟ್ಯಾಂಡ್ ಬೈ ಆಟಗಾರರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...