ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ವಿನಯ್ ಮೃತ್ಯುಂಜಯ ಈ ಬಗ್ಗೆ ಮಾಹಿತಿ ನೀಡಿದ್ದು, ಬಿ.ಎಸ್. ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದರು. ಆಯಾಸ ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಂತರ ಎರಡು ದಿನದಲ್ಲಿ ಮನೆಗೆ ಮರಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.