alex Certify BIG NEWS: ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ

ಕೊಲ್ಕತ್ತಾ: ಭಾರತ ತಂಡವನ್ನು ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿ ಅಧ್ಯಕ್ಷ ಅರ್ಜುನ್ ಸಿಂಗ್ ಅವರ ಸಮ್ಮುಖದಲ್ಲಿ ಅಶೋಕ್ ದಿಂಡಾ ಬಿಜೆಪಿ ಸೇರಿದ್ದಾರೆ.

ಇತ್ತೀಚೆಗೆ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗಳಿಂದ ನಿವೃತ್ತಿ ಘೋಷಿಸಿದ್ದರು. 13 ಏಕದಿನ ಮತ್ತು 9 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅಶೋಕ್ ದಿಂಡಾ ಕ್ರಮವಾಗಿ 12 ಮತ್ತು 17 ವಿಕೆಟ್ ಪಡೆದಿದ್ದಾರೆ. ಕ್ರಿಕೆಟಿಗ ಮನೋಜ್ ತಿವಾರಿ ಕೊಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ ಮರುದಿನವೇ ಅಸೋಕ್ ದಿಂಡಾ ಬಿಜೆಪಿಗೆ ಸೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...