ಗುರುವಾರ ಐಪಿಎಲ್ ಆಟಗಾರರ ಹರಾಜು ನಡೆಯಲಿದೆ. ಯಾವ ಆಟಗಾರರು ಯಾವ ತಂಡ ಸೇರಲಿದ್ದಾರೆಂಬ ಕುತೂಹಲವಿದೆ. ಈ ಮಧ್ಯೆ ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಲಹೆಯೊಂದನ್ನು ನೀಡಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅವರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ಗೌತಮ್ ಗಂಭೀರ್ ಹೇಳಿದ್ದಾರೆ.
ಟಿ 20 ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ಮ್ಯಾಕ್ಸ್‌ವೆಲ್, ಐಪಿಎಲ್ ಹರಾಜಿನ 292 ಆಟಗಾರರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಆರ್ಸಿಬಿ ಮ್ಯಾಕ್ಸ್ ವೆಲ್ ರಂತಹ ಆಟಗಾರರನ್ನು ಖರೀದಿ ಮಾಡಿದ್ರೆ ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್ ಮೇಲೆ ಒತ್ತಡ ಕಡಿಮೆಯಾಗುತ್ತದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಫಾಫ್ ಡು ಪ್ಲೆಸಿಸ್
ಇನ್ನು ಕಿಂಗ್ಸ್ ಇಲವೆನ್ ಪಂಜಾಬ್ ತಂಡ, ಉಮೇಶ್ ಯಾದವ್, ಕೈಲ್ ಜೇಮ್ಸನ್ ಮತ್ತು ಕ್ರಿಸ್ ಮೋರಿಸ್ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಗಂಭೀರ್ ಹೇಳಿದ್ದಾರೆ. ಕಿಂಗ್ಸ್ ಇಲವೆನ್ ಪಂಜಾಬ್ ಗೆ ಭಾರತೀಯ ಬೌಲಿಂಗ್ ವಿಭಾಗವನ್ನು ಬಲಪಡಿಸಬೇಕು ಎಂದಿದ್ದಾರೆ.
ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಬೆಂಗಳೂರು ತಂಡ ಸೇರುವ ಸುಳಿವನ್ನು ಈಗಾಗಲೇ ನೀಡಿದ್ದಾರೆ. ವಿರಾಟ್ ಕೊಹ್ಲಿ ಜೊತೆ ಹೊಂದಿಕೊಳ್ಳುತ್ತೇನೆಂದು ಅವ್ರು ಹೇಳಿದ್ದಾರೆ.