alex Certify ಟೀಕಾಕಾರರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ ಕೊಹ್ಲಿ ಆಕರ್ಷಕ ಅರ್ಧ ಶತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಕಾಕಾರರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ ಕೊಹ್ಲಿ ಆಕರ್ಷಕ ಅರ್ಧ ಶತಕ

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಈ ಋತುವಿನಲ್ಲಿ ವಿರಾಟ್ ಕೊಹ್ಲಿ ಗಳಿಸಿದ ಮೊದಲ ಅರ್ಧಶತಕ ಇದಾಗಿದ್ದು, ಐಪಿಎಲ್ ನಲ್ಲಿ 43 ನೇ ಅರ್ಧ ಶತಕ ಸಿಡಿಸಿದ್ದಾರೆ.

ಕೊನೆಯ ಮೂರು ಪಂದ್ಯಗಳಲ್ಲಿ ಎರಡು ಬಾರಿ ಅವರು ಶೂನ್ಯಕ್ಕೆ ಔಟ್ ಆಗಿ ಒತ್ತಡಕ್ಕೆ ಒಳಗಾಗಿದ್ದ ಕೊಹ್ಲಿ ಟೀಕಾಕಾರರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿ 58 ರನ್ ಗಳಿಸಿದ್ದಾರೆ. ರಜತ್ ಪಾಟಿದಾರ್ 52, ಗ್ಲೆನ್ ಮ್ಯಾಕ್ಸ್ವೆಲ್ 33 ರನ್ ಗಳಿಸಿದ್ದು ಆರ್ಸಿಬಿ 20 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರರನ್ ಗಳಿಸಿದೆ. ಗೆಲುವಿನ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್ 11 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...