
ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 1989 ನವೆಂಬರ್ 15ರಂದು ಟೆಸ್ಟ್ ಕ್ರಿಕೆಟ್ ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.
ಕೇವಲ 16 ನೇ ವಯಸ್ಸಿನಲ್ಲಿ ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಟ್ಟ ಸಚಿನ್ ತೆಂಡೂಲ್ಕರ್ ಹಲವಾರು ದಾಖಲೆಗಳನ್ನು ಬರೆದಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ 463 ಪಂದ್ಯಗಳನ್ನಾಡಿರುವ ಸಚಿನ್ 18426 ರನ್ ಗಳನ್ನು ಬಾರಿಸಿದ್ದು, ಇದುವರೆಗೂ ಈ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.
ಏಕದಿನ ಕ್ರಿಕೆಟ್ ನಲ್ಲಿ 49 ಶತಕಗಳನ್ನು ಸಿಡಿಸಿರುವ ಸಚಿನ್ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 1973 ಏಪ್ರಿಲ್ 24ರಂದು ಮುಂಬೈನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಇವರ ಪೂರ್ತಿ ಹೆಸರು ಸಚಿನ್ ರಮೇಶ್ ತೆಂಡೂಲ್ಕರ್. ಇಂದು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಕ್ರಿಕೆಟಿಗರು ಹಾಗೂ ಯುವ ಕ್ರಿಕೆಟಿಗರು ಸಚಿನ್ ತೆಂಡೂಲ್ಕರ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.