alex Certify ಸಹೋದರ ಕ್ರುನಾಲ್​ಗೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಹಾರ್ದಿಕ್​ ಪಾಂಡ್ಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರ ಕ್ರುನಾಲ್​ಗೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಹಾರ್ದಿಕ್​ ಪಾಂಡ್ಯ..!

ಟೀಂ ಇಂಡಿಯಾ ಆಟಗಾರ ಹಾರ್ದಿಕ್​ ಪಾಂಡ್ಯಾ ಸಹೋದರ ಕ್ರುನಾಲ್​ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದಾರೆ. ಹೀಗಾಗಿ ಪಾಂಡ್ಯಾ ತನ್ನ ಸಹೋದರನಿಗೆ ಹುಟ್ಟು ಹಬ್ಬದ ಶುಭಕೋರುವ ವಿಡಿಯೋವನ್ನ ಶೇರ್​ ಮಾಡಿದ್ದು ಅಭಿಮಾನಿಗಳು ಫುಲ್​ ಖುಶ್​ ಆಗಿದ್ದಾರೆ.

ಪುಣೆಯಲ್ಲಿ ನಡೆದ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್​ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದ ಮೂಲಕ ಕ್ರುನಾಲ್​ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ. ಕೇವಲ 26 ಎಸೆತಗಳಲ್ಲೇ ಅರ್ಧಶತಕ ಪೂರೈಸಿದ ಕ್ರುನಾಲ್​ ಚೊಚ್ಚಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದಿದ್ದಾರೆ.

31 ಬಾಲ್​ಗಳಿಗೆ ಕ್ರುನಾಲ್​ 58 ರನ್​ಗಳನ್ನ ಗಳಿಸಿದ್ದು ಟೀಂ ಇಂಡಿಯಾ ಗೆಲುವಿನ ನಗೆ ಬೀರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪಂದ್ಯ ಮುಗಿದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಶೇರ್​ ಮಾಡಿದ ಹಾರ್ದಿಕ್​ ಪಾಂಡ್ಯಾ, ತಂದೆಗೆ ಹೆಮ್ಮೆ ಎನಿಸುತ್ತಿರಬಹುದು. ನಿನ್ನ ನೋಡಿ ತಂದೆ ನಗುತ್ತಿದ್ದಾರೆ ಸಹೋದರ, ಅವರು ನಿನಗಾಗಿ ಬರ್ತಡೇ ಉಡುಗೊರೆ ಕಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ ಶುಭ ಕೋರುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...