ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನ ಲಭಿಸಿದ್ದು, ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸಿದ್ದಾರೆ.
ಚಿನ್ನ ಗೆದ್ದ ನೀರಜ್ ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಭೂತಪೂರ್ವ ಸಾಧನೆ ಎಂದು ಬಣ್ಣಿಸಿದ್ದು ನಿಮ್ಮ ಜಾವೆಲಿನ್ ಎಸೆತ ಇತಿಹಾಸವನ್ನು ಸೃಷ್ಟಿಸಿದೆ. ನಿಮ್ಮ ಸಾಧನೆ ಯುವಕರಿಗೆ ಸ್ಪೂರ್ತಿ ನೀಡಿದೆ. ನಿಮ್ಮ ಸಾಧನೆಗೆ ಭಾರತವೇ ಸಂಭ್ರಮಿಸಿದೆ. ಹೃದಯಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರದಿಂದ 6 ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಹರಿಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ಈ ಮೊದಲೇ ಘೋಷಿಸಿದಂತೆ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದವರಿಗೆ 6 ಕೋಟಿ ರೂ. ಬಹುಮಾನ ನೀಡಲಾಗುವುದು.
ನೀರಜ್ ಗೆ ಸರ್ಕಾರಿ ಪ್ರಥಮ ದರ್ಜೆ ಸಹಾಯಕ ಉದ್ಯೋಗ ನೀಡುವುದಾಗಿ ಸಿಎಂ ಮನೋಹರ್ ಲಾಲ್ ಖಟ್ಟರ್ ಘೋಷಿಸಿದ್ದಾರೆ.
ನೀರಜ್ ಚೋಪ್ರಾ ಗೆ ಮಹಿಂದ್ರ ಕಂಪನಿಯಿಂದ xuv700 ಕಾರು ಗಿಫ್ಟ್ ಕೊಡುವುದಾಗಿ ಮಹಿಂದ್ರಾ ಕಂಪನಿಯ ಮಾಲೀಕ ಆನಂದ್ ಮಹೀಂದ್ರ ಘೋಷಣೆ ಮಾಡಿದ್ದಾರೆ.