alex Certify ಬಿಗ್ ನ್ಯೂಸ್: ಟಿ20 ವಿಶ್ವಕಪ್ ಮುಂದೂಡಿಕೆ, ಐಪಿಎಲ್ ಗೆ ಮುಹೂರ್ತ ನಿಗದಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಟಿ20 ವಿಶ್ವಕಪ್ ಮುಂದೂಡಿಕೆ, ಐಪಿಎಲ್ ಗೆ ಮುಹೂರ್ತ ನಿಗದಿ ಸಾಧ್ಯತೆ

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯನ್ನು ಮುಂದೂಡಲು ಐಸಿಸಿ ನಿರ್ಧಾರ ಕೈಗೊಂಡಿದೆ. ಕೊರೊನಾ ಕಾರಣದಿಂದಾಗಿ ಟಿ-20ವಿಶ್ವಕಪ್ ಟೂರ್ನಿಯನ್ನು ಮುಂದೂಡಲು ನಿರ್ಧರಿಸಲಾಗಿದೆ.

ಅಕ್ಟೋಬರ್ 18ರಿಂದ ನವೆಂಬರ್ 15 ರವರೆಗೆ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಿಗದಿಯಾಗಿತ್ತು. ಇನ್ನು ಟಿ20 ವಿಶ್ವಕಪ್ ಟೂರ್ನಿ ಮುಂದೂಡಿಕೆಯಾಗಿರುವುದರಿಂದ ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಎಂದೇ ಕರೆಯಲಾಗುವ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.

ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡಿರುವ ಬಿಸಿಸಿಐ ಸೆಪ್ಟೆಂಬರ್ 26 ರಿಂದ ನವೆಂಬರ್ 7 ರವರೆಗೆ ಐಪಿಎಲ್ 13ನೇ ಆವೃತ್ತಿಯನ್ನು ಆಯೋಜಿಸಲು ಸಜ್ಜಾಗಿದೆ. ಇಂದು ಐಸಿಸಿ ಸಭೆಯಲ್ಲಿ ಟಿ20 ವಿಶ್ವಕಪ್ ಮುಂದೂಡಲು ತೀರ್ಮಾನ ಕೈಗೊಳ್ಳಲಾಗಿದ್ದು, 2021 ಮತ್ತು 22 ರಲ್ಲಿ ಟಿ20 ವಿಶ್ವಕಪ್ ಆಯೋಜಿಸಲಾಗುವುದು. 2023 ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...