alex Certify ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ: ICC ರ್ಯಾಂಕಿಂಗ್ ನಲ್ಲಿ ಪ್ರಾಬಲ್ಯ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ: ICC ರ್ಯಾಂಕಿಂಗ್ ನಲ್ಲಿ ಪ್ರಾಬಲ್ಯ ಮುಂದುವರಿಕೆ

ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರು ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿ ಪ್ರಾಬಲ್ಯ ಮುಂದುವರೆಸಿದ್ದಾರೆ.

871 ಪಾಯಿಂಟ್ ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದು, 855 ಪಾಯಿಂಟ್ ಗಳೊಂದಿಗೆ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಕೊರೋನಾ ಕಾರಣದಿಂದಾಗಿ ಕ್ರೀಡಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹಾಗಾಗಿ ಯಾವುದೇ ಟೂರ್ನಿಗಳು ನಡೆದಿರಲಿಲ್ಲ. ಇದೀಗ ಮತ್ತೆ ಟೂರ್ನಿಗಳು ಆರಂಭವಾಗಿದ್ದು, ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮೊದಲ 2 ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್ ನ ಟ್ರೆಂಟ್ ಬೋಲ್ಟ್ 722 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಜಸ್ಪ್ರೀತ್ ಬುಮ್ರಾ 719 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...