ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ODI ಸರಣಿಯ ಮೊದಲನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಇತ್ತೀಚಿನ ICC ಪುರುಷರ ODI ಬೌಲಿಂಗ್ ರ್ಯಾಂಕಿಂಗ್ ನಲ್ಲಿ ತಮ್ಮ ನಂಬರ್ 1 ಸ್ಥಾನವನ್ನು ಮರಳಿ ಪಡೆದುಕೊಂಡಿದ್ದಾರೆ.
ಜಸ್ಪ್ರೀತ್ ಬೂಮ್ರಾ ಅವರು ಟ್ರೆಂಟ್ ಬೌಲ್ಟ್ ಅವರನ್ನು ಸ್ಥಾನಪಲ್ಲಟಗೊಳಿಸಿ ಮೂರು ಸ್ಥಾನಗಳನ್ನು ಜಿಗಿದು ನಂಬರ್ 1 ಸ್ಥಾನಕ್ಕೇರಿದ್ದಾರೆ.
ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ 712 ರೇಟಿಂಗ್ ಅಂಕಗಳೊಂದಿಗೆ 2 ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಎಡಗೈ ವೇಗಿ ಶಾಹೀನ್ ಶಾ ಆಫ್ರಿದಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 681 ರೇಟಿಂಗ್ ಹೊಂದಿದ್ದಾರೆ.
ಹಿಂದಿನ ಎರಡು ವರ್ಷಗಳಲ್ಲಿ ನಂಬರ್ 1 ಆಗಿದ್ದ ಬುಮ್ರಾ ಫೆಬ್ರವರಿ 2020 ರಲ್ಲಿ ಬೌಲ್ಟ್ ಗೆ ಅಗ್ರ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. 2018 ರಲ್ಲಿ ವೈಯಕ್ತಿಕ ಅತ್ಯುತ್ತಮ ರೇಟಿಂಗ್(841) ಹೊಂದಿದ್ದ ಬುಮ್ರಾ, ಈಗ ಮತ್ತೆ ಉತ್ತಮ ಫಾರ್ಮ್ ನಲ್ಲಿದ್ದಾರೆ.