ಹೈದರಾಬಾದ್: ರೋಹಿತ್ ಶರ್ಮಾ ಪೂರ್ಣ ಪ್ರಮಾಣದ ನಾಯಕರಾದ ನಂತರ ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ಗೆಲುವಿನ ಓಟ ಮುಂದುವರೆಸಿದ್ದು, ರೋಹಿತ್ ಶರ್ಮಾ ಸಾರಥ್ಯದಲ್ಲಿ ಸತತ 9ನೇ ಸರಣಿ ಗೆಲುವಿನ ಸಾಧನೆ ಮಾಡಿದೆ.
ಹೈದರಾಬಾದ್ ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳಿಂದ ಜಯಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದ್ದು, ಗೆಲುವಿನ ಗುರಿ ಬೆನ್ನತ್ತಿದ ಭಾರತ ವಿರಾಟ್ ಕೊಹ್ಲಿ(63) ಮತ್ತು ಸೂರ್ಯಕುಮಾರ್(69) ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 19.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ಗೆ 187 ರನ್ ಗಳಿಸಿದ್ದು, 2 -1 ಅಂತರದಿಂದ ಸರಣಿ ಜಯಿಸಿದೆ.