ಸೌತಾಂಪ್ಟನ್: ಸೌತಾಂಪ್ಟನ್ ನ ರೋಸ್ ಬೌಲ್ ನಲ್ಲಿ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ 50 ರನ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಹಾರ್ದಿಕ್ ಪಾಂಡ್ಯ ಅವರ ಆಲ್ ರೌಂಡ್ ಪ್ರದರ್ಶನ ತಂಡದ ಗೆಲುವಿಗೆ ಸಹಕಾರಿಯಾಗಿದ್ದು, ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಂದುಕೊಟ್ಟಿತು. ಪಾಂಡ್ಯ 33 ಎಸೆತಗಳಲ್ಲಿ 51 ರನ್ ಗಳಿಸಿದರಲ್ಲದೇ. ನಾಲ್ಕು ವಿಕೆಟ್ ಗಳನ್ನು ಪಡೆದರು.
ಕಳೆದ ವಾರ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿದ್ದ ಭಾರತೀಯ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತಕ್ಕೆ ಭರ್ಜರಿ ಆರಂಭ ಸಿಕ್ಕಿತು. ಶರ್ಮಾ 14 ಎಸೆತಗಳಲ್ಲಿ 24 ರನ್ ಗಳಿಸಿದರು. ಇಶಾನ್ ಕಿಶನ್ 8, ದೀಪಕ್ ಹೂಡ 33, ಸೂರ್ಯ ಕುಮಾರ್ ಯಾದವ್ 39, ಹಾರ್ದಿಕ್ ಪಾಂಡ್ಯ 51, ಅಕ್ಷರ್ ಪಟೇಲ್ 17, ದಿನೇಶ್ ಕಾರ್ತಿಕ್ 11, ಹರ್ಷಲ್ ಪಟೇಲ್ 3, ಭುವನೇಶ್ವರ್ ಕುಮಾರ್ ಅಜೇಯ 1, ಆಶ್ ದೀಪ್ ಸಿಂಗ್ ಅಜೇಯ 2 ರನ್ ಗಳಿಸಿದರು. ಭಾರತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 198 ರನ್ ಗಳಿಸಿತು. ಇಂಗ್ಲೆಂಡ್ ಪರವಾಗಿ ಕ್ರಿಸ್ಟ್ ಜೋರ್ಡನ್ 2, ಮೊಯಿನ್ ಅಲಿ 2 ವಿಕೆಟ್ ಪಡೆದರು.
ಗೆಲುವಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.3 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 148 ರನ್ ಗಳಿಸಿತು. ಇಂಗ್ಲೆಂಡ್ ಪರವಾಗಿ ಡೇವಿಡ್ ಮಲನ್ 21, ಹ್ಯಾರಿ ಬ್ರೂಕ್ 28, ಮೋಹಿನ್ ಅಲಿ 36, ಕ್ರಿಸ್ ಜೋರ್ಡಾನ್ ಅಜೇಯ 26 ರನ್ ಗಳಿಸಿದರು. ಭಾರತದ ಪರ ಹಾರ್ದಿಕ್ ಪಾಂಡ್ಯ 4, ಆರ್ಶ್ ದೀಪ್ ಸಿಂಗ್ 2, ಯಜುಯೇಂದ್ರ ಚಾಹಲ್ 2 ವಿಕೆಟ್ ಪಡೆದರು.