ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯುತ್ತಿದೆ. ಕೊನೆಯ ಪಂದ್ಯದ ಎರಡನೇ ದಿನ ಟೀಂ ಇಂಡಿಯಾದ ಸ್ಟಾರ್ ಓಪನರ್ ರೋಹಿತ್ ಶರ್ಮಾಗೆ ವಿಶೇಷ ದಿನವಾಗಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 1000 ರನ್ ಗಳಿಸಿದ ವಿಶ್ವದ ಮೊದಲ ಆರಂಭಿಕ ಬ್ಯಾಟ್ಸ್ ಮನ್ ಆಗಿದ್ದಾರೆ. ಒಟ್ಟಾರೆ ನೋಡುವುದಾದ್ರೆ ಈ ಸಾಧನೆ ಮಾಡಿದ ವಿಶ್ವದ ಆರನೇ ಆಟಗಾರರಾಗಿದ್ದಾರೆ ರೋಹಿತ್ ಶರ್ಮಾ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ 1000 ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ. ರೋಹಿತ್ ಮೊದಲು ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ 1000 ರನ್ ಪೂರ್ಣಗೊಳಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾದ ಯುವ ಸ್ಟಾರ್ ಬ್ಯಾಟ್ಸ್ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, 1,675 ರನ್ ಗಳಿಸಿದ್ದಾರೆ.