ಕೊರೊನಾಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಹೊಸ ಮಾರ್ಗ ಸೂಚಿ ನಂತ್ರ ಚೆನ್ನೈನಲ್ಲಿ ನಡೆಯುವ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ವೀಕ್ಷಣೆಗೆ ಅಭಿಮಾನಿಗಳು ಮೈದಾನಕ್ಕೆ ಬರಲು ಅನುಮತಿ ಸಿಗುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಬಿಸಿಸಿಐ, ಮೂರನೇ ಟೆಸ್ಟ್ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜಿಗೆ ಆಹ್ವಾನ ಕಳುಹಿಸಿದೆ. ಇವರೆಲ್ಲರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪಂದ್ಯ ವೀಕ್ಷಣೆಗಾಗಿ ಕ್ರೀಡಾಂಗಣಕ್ಕೆ ಬರುವ ಸಾಧ್ಯತೆಯಿದೆ. ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಎರಡು ಬಾರಿ ಪ್ರೇಕ್ಷಕರ ಪ್ರವೇಶದ ಬಗ್ಗೆ ಚರ್ಚೆ ನಡೆಸಿದೆ.
ಐಪಿಎಲ್ ನಲ್ಲಿ 150 ಕೋಟಿ ರೂ. ಗಳಿಕೆ ಮಾಡಿ ದಾಖಲೆ ಬರೆದ ಧೋನಿ
ಕೊರೊನಾ ಕಾರಣಕ್ಕೆ ಎರಡು ಟೆಸ್ಟ್ ಪಂದ್ಯಗಳಲ್ಲಿ ಮೈದಾನವನ್ನು ಖಾಲಿ ಬಿಡುವಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ರೆ ಇದಾದ ಮೇಲೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬದಲಿಸಿದೆ. ಕ್ರೀಡಾಂಗಣದಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರು ಬರಬಹುದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಫೆಬ್ರವರಿ 5ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದಕ್ಕೆ ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡಲು ಈಗ ಅವಕಾಶವಿಲ್ಲ. ಹಾಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.