ಕಾನ್ಪುರ್: ಭಾರತ ತಂಡದ ಕ್ರಿಕೆಟ್ ಆಟಗಾರ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಬಾರಿಸಿದ ಅವರು ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿದ್ದಾರೆ. ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ ಎಂಬ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.
ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಚೊಚ್ಚಲ ಪಂದ್ಯದಲ್ಲೇ ಎರಡು ಇನ್ನಿಂಗ್ಸ್ ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ ದಿಲಾವರ್ ಹುಸೇನ್ ಮತ್ತು ಸುನಿಲ್ ಗವಾಸ್ಕರ್ ಈ ಸಾಧನೆ ಮಾಡಿದ್ದಾರೆ.
ಪಾದಾರ್ಪಣೆ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಶತಕ, ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಶ್ರೇಯಸ್ ಅಯ್ಯರ್, ಪಾದಾರ್ಪಣೆ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಆಟಗಾರನಾಗಿದ್ದಾರೆ. ಮೊದಲ ಪಂದ್ಯದಲ್ಲಿ ಅವರು 170 ರನ್ ಗಳಿಸಿದ್ದಾರೆ. ಶಿಖರ್ ಧವನ್(187), ರೋಹಿತ್ ಶರ್ಮಾ(177) ರನ್ ಗಳಿಸಿ ಮೊದಲೆರಡು ಸ್ಥಾನಗಳಲ್ಲಿದ್ದಾರೆ.