alex Certify ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ನಾಯಕನಾಗಿ ರೋಹಿತ್ ಶರ್ಮಾ; ರೆಹಾನೆ, ಪೂಜಾರಗೆ ಕೊಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ನಾಯಕನಾಗಿ ರೋಹಿತ್ ಶರ್ಮಾ; ರೆಹಾನೆ, ಪೂಜಾರಗೆ ಕೊಕ್

ಶ್ರೀಲಂಕಾ ವಿರುದ್ಧ ಮುಂಬರುವ ಟೆಸ್ಟ್ ಪಂದ್ಯಗಳಿಗೆ ವೈಟ್ ಬಾಲ್ ನಾಯಕ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಿದರು.

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆಗಾರರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶ್ರೀಲಂಕಾ ಸರಣಿಗೆ ಆಯ್ಕೆಗಾರರು ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ಅವರನ್ನು ಭಾರತ ತಂಡದ ಹೊಸ ಟೆಸ್ಟ್ ನಾಯಕನನ್ನಾಗಿ ಘೋಷಿಸಿದರು.

ಭಾರತದ ಶ್ರೀಲಂಕಾ ಪ್ರವಾಸವು 3 ಟಿ20 ಮತ್ತು 2 ಟೆಸ್ಟ್ ಪಂದ್ಯಗಳನ್ನು ಒಳಗೊಂಡಿದೆ.

ದೀರ್ಘಕಾಲದವರೆಗೆ ಭಾರತದ ಮಧ್ಯಮ ಕ್ರಮಾಂಕದ ಆಧಾರ ಸ್ತಂಭವಾಗಿದ್ದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ಟೆಸ್ಟ್ ಸರಣಿಗೆ ಭಾರತ ತಂಡ:

ರೋಹಿತ್ ಶರ್ಮಾ(ಸಿ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್. ಅಶ್ವಿನ್(ಫಿಟ್ನೆಸ್ ಗೆ ಒಳಪಟ್ಟು), ಆರ್ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜೆ ಬುಮ್ರಾ(ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...