alex Certify ವಿರಾಟ್ ಕೊಹ್ಲಿ ಭರ್ಜರಿ ಶತಕ: ಬಾಂಗ್ಲಾ ಬಗ್ಗು ಬಡಿದ ಭಾರತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ ಭರ್ಜರಿ ಶತಕ: ಬಾಂಗ್ಲಾ ಬಗ್ಗು ಬಡಿದ ಭಾರತ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ತಾಂಜಿದ್ ಹಸನ್ 51, ಲಿಟ್ಟನ್ ದಾಸ್ 66, ಮುಷಫೀರ್ ರಹೀಂ 38, ಮಹಮ್ಮದ್ ಉಲ್ಲಾ 46 ರನ್ ಗಳಿಸಿದರು. ಭಾರತದ ಪರ ಬೂಮ್ರಾ 2, ಮೊಹಮ್ಮದ್ ಸಿರಾಜ್ 2, ರವೀಂದ್ರ ಜಡೇಜ 2 ವಿಕೆಟ್ ಪಡೆದರು.

ಗೆಲುವಿನ ಗುರಿ ಬೆನ್ನತ್ತಿದ ಭಾರತ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 41.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿತು. ರೋಹಿತ್ ಶರ್ಮಾ 48, ಶುಭಮನ್ ಗಿಲ್ 53, ವಿರಾಟ್ ಕೊಹ್ಲಿ ಅಜೇಯ 103, ಶ್ರೇಯಸ್ ಅಯ್ಯರ್ 19, ಕೆಎಲ್ ರಾಹುಲ್ ಅಜೇಯ 34 ರನ್ ಗಳಿಸಿದರು. ಮೆಹಂದಿ ಹಸನ್ 2, ಹಸನ್ ಮಹಮ್ಮದ್ 1 ವಿಕೆಟ್ ಪಡೆದರು. ಇದರೊಂದಿಗೆ ಭಾರತದ ವಿಶ್ವಕಪ್ ನಲ್ಲಿ ಸತತ 4 ಪಂದ್ಯ ಜಯಿಸಿದೆ. ಅ. 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...