
ಲಂಡನ್: ಬೂಮ್ರಾ ಮಾರಕ ಬೌಲಿಂಗ್ ಮತ್ತು ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಿಂದಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಜಯ ದಾಖಲಿಸಿದೆ.
ದಿ ಓವೆಲ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 25 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 110 ರನ್ ಗಳಿಸಿತು. ಭಾರತದ ಪರವಾಗಿ ಬೂಮ್ರಾ 6, ಮೊಹಮ್ಮದ್ ಶಮಿ 3 ಹಾಗೂ ಪ್ರಸಿದ್ಧ ಕೃಷ್ಣ 1 ವಿಕೆಟ್ ಪಡೆದರು. ಇಂಗ್ಲೆಂಡ್ ಪರವಾಗಿ ಜೋಸ್ ಬಟ್ಲರ್ 30, ಡೇವಿಡ್ ವಿಲ್ಲೆ 21 ರನ್ ಗಳಿಸಿದರು.
ಗೆಲುವಿನ ಗುರಿ ಬೆನ್ನತ್ತಿದ ಭಾರತ ವಿಕೆಟ್ ನಷ್ಟವಿಲ್ಲದೆ 18.4 ಓವರ್ ಗಳಲ್ಲಿ 114 ರನ್ ಗಳಿಸಿತು. ರೋಹಿತ್ ಶರ್ಮಾ ಅಜೇಯ 76, ಶಿಖರ್ ಧವನ್ ಅಜೇಯ 31 ರನ್ ಗಳಿಸಿದರು.