alex Certify ಪಾಕ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ: ಏಕದಿನದಲ್ಲಿ 300ನೇ ಸಿಕ್ಸರ್ ಸಿಡಿಸಿ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ: ಏಕದಿನದಲ್ಲಿ 300ನೇ ಸಿಕ್ಸರ್ ಸಿಡಿಸಿ ದಾಖಲೆ

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿರುವ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿ 42.5 ಓವರ್ ಗಳಲ್ಲಿ 191 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ಪರವಾಗಿ ಬಾಬರ್ ಆಜಂ 50, ಮಹಮ್ಮದ್ ರಿಜ್ವಾನ್ 49, ಇಮಾಮ್ ಉಲ್ ಹಕ್ 36 ರನ್ ಗಳಿಸಿದರು. ಭಾರತದ ಪರ ಬೂಮ್ರಾ, ಮಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀದ್ರ ಜಡೇಜ ತಲಾ 2 ವಿಕೆಟ್ ಪಡೆದರು.

ಗೆಲುವಿನ ಗುರಿ ಬೆನ್ನತ್ತಿದ ಭಾರತದ ಪರ ರೋಹಿತ್ ಶರ್ಮಾ ಅಜೇಯ 60, ಶುಭಮನ್ ಗಿಲ್ 16, ವಿರಾಟ್ ಕೊಹ್ಲಿ 16, ಶ್ರೇಯಸ್ ಅಯ್ಯರ್ ಅಜೇಯ 15 ರನ್ ಗಳಿಸಿದ್ದಾರೆ. ಪಾಕ್ ಪರ ಶಾಹಿನ್ ಅಫ್ರಿದಿ 1, ಹಸನ್ ಅಲಿ 1 ವಿಕೆಟ್ ಪಡೆದರು. ಆಟ ಮುಂದುವರೆದಿದ್ದು, ಭಾರತ 14.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.

ರೋಹಿತ್ ಶರ್ಮಾ ದಾಖಲೆ:

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 300 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ಕಳೆದ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದರು.

ಅವರು ಏಕದಿನದಲ್ಲಿ 302, ಟೆಸ್ಟ್ ನಲ್ಲಿ 77, ಟಿ20ಯಲ್ಲಿ 182 ಸಿಕ್ಸರ್ ಸೇರಿ ಒಟ್ಟಾರೆ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 561 ಸಿಕ್ಸರ್ ಸಿಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...