
ಬೆಂಗಳೂರಿನಲ್ಲಿ ನಾಳೆ ಭಾರತ -ಶ್ರೀಲಂಕಾ ನಡುವೆ ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಯಲಿದೆ. ಪಂದ್ಯದ ವೇಳೆ ಭದ್ರತೆಯ ಬಗ್ಗೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಒಂದು ವಾರದಿಂದ ಮೈದಾನದ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ವೀಕ್ಷಣ ಗೋಪುರಗಳನ್ನು ನಿರ್ಮಿಸಲಾಗಿದೆ. ಪಂದ್ಯದ 5 ದಿನದ ಭದ್ರತೆಗೆ 700 ಸಿಬ್ಬಂದಿ ನಿಯೋಜಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಭದ್ರತೆಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.