
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಏಕದಿನ ಸರಣಿಯಲ್ಲಿ ಪುನರಾಗಮನಕ್ಕೆ ಸಿದ್ಧರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಹೆಬ್ಬೆರಳಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಹಾರ್ದಿಕ್ ಟಿ20 ಐಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಮತ್ತು ಶುಭಮನ್ ಗಿಲ್ ಅವರು ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಪ್ರತಿನಿಧಿಸುವರು. KL ರಾಹುಲ್ ರಜೆ ಕೇಳಿದ್ದಾರೆ. ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಪುನರಾಗಮನ ಮಾಡಲಿದ್ದಾರೆ. ಶಿಖರ್ ಧವನ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ದ್ವಿಶತಕ ಗಳಿಸಿದ ಇಶಾನ್ ಕಿಶನ್ ಜೊತೆಗೆ ರೋಹಿತ್ ಗೆ ಶುಭಮನ್ ಗಿಲ್ ಮತ್ತೊಂದು ಆರಂಭಿಕ ಆಯ್ಕೆಯಾಗಿ ಮುಂದುವರಿಯಲಿದ್ದಾರೆ. ಟಿ20 ಸರಣಿಯಲ್ಲಿ ವಿರಾಮದ ನಂತರ ರಾಹುಲ್ ಕೂಡ ಪುನರಾಗಮನ ಮಾಡಲಿದ್ದಾರೆ. ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕವನ್ನು ರಚಿಸಿದರೆ, ಹಾರ್ದಿಕ್ ಪಾಂಡ್ಯ (ವಿಸಿ), ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಲ್ ರೌಂಡ್ ಆಯ್ಕೆಯಾಗಿದ್ದಾರೆ.
ಶ್ರೀಲಂಕಾ ಟಿ20 ಸರಣಿಗೆ ಭಾರತ ತಂಡ:
ಹಾರ್ದಿಕ್ ಪಾಂಡ್ಯ(ನಾಯಕ), ಇಶಾನ್ ಕಿಶನ್(WK), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(VC), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಶ್ದೀಪ್ ಪಟೇಲ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.
ಏಕದಿನ ಪಂದ್ಯಗಳಿಗೆ ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(WK), ಇಶಾನ್ ಕಿಶನ್(wk), ಹಾರ್ದಿಕ್ ಪಾಂಡ್ಯ(VC), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಭಾರತ –ಶ್ರೀಲಂಕಾ ಟಿ20 ಮತ್ತು ಏಕದಿನ ಸರಣಿ
ಭಾರತ vs ಶ್ರೀಲಂಕಾ 1 ನೇ ಟಿ20: ಜನವರಿ 3 ರಂದು ಮುಂಬೈ
ಭಾರತ vs ಶ್ರೀಲಂಕಾ 2 ನೇ ಟಿ20: ಜನವರಿ 5 ರಂದು ಪುಣೆ
ಭಾರತ vs ಶ್ರೀಲಂಕಾ 3ನೇ ಟಿ20: ಜನವರಿ 7 ರಂದು ರಾಜ್‌ಕೋಟ್
ಭಾರತ vs ಶ್ರೀಲಂಕಾ ಮೊದಲ ಏಕದಿನ ಪಂದ್ಯ: ಜನವರಿ 10 ಗುವಾಹಟಿ
ಭಾರತ vs ಶ್ರೀಲಂಕಾ 2ನೇ ಏಕದಿನ ಪಂದ್ಯ: ಜನವರಿ 12 ಕೋಲ್ಕತ್ತಾ
ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯ: ಜನವರಿ 15 ರಂದು ತಿರುವನಂತಪುರ