alex Certify ಪಾಕ್ ವಿರುದ್ಧವೇ ಮೊದಲ ಪಂದ್ಯ: T20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಬುಮ್ರಾ, ಹರ್ಷಲ್ ಪಟೇಲ್ ಪುನರಾಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ವಿರುದ್ಧವೇ ಮೊದಲ ಪಂದ್ಯ: T20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಬುಮ್ರಾ, ಹರ್ಷಲ್ ಪಟೇಲ್ ಪುನರಾಗಮನ

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ 2022ರ ಐಸಿಸಿ ಟಿ20 ವಿಶ್ವಕಪ್‌ ಗೆ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದರೆ, ಕೆ.ಎಲ್. ರಾಹುಲ್ ಉಪನಾಯಕರಾಗಿರುತ್ತಾರೆ. ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ಮರಳಿದ್ದಾರೆ.

ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಮತ್ತು ಪಾರ್ಶ್ವದ ಒತ್ತಡದಿಂದ ಬಳಲುತ್ತಿದ್ದ ಹರ್ಷಲ್ ಅವರನ್ನು ಫಿಟ್ ಎಂದು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

 ಸ್ಟ್ಯಾಂಡ್‌ಬೈ ಆಟಗಾರರು – ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...