ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸತತ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋಲುಂಡಿದೆ. ಮಂಗಳವಾರ ಚೆನ್ನೈನಲ್ಲಿ ನಡೆದ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 227 ರನ್ ಗಳ ಸೋಲುಂಡಿದೆ. ಇದಕ್ಕೂ ಮೊದಲು ಭಾರತ ಅಡಿಲೇಡ್, ಕ್ರೈಸ್ಟ್ ಚರ್ಚ್ ಮತ್ತು ವೆಲ್ಲಿಂಗ್ಟನ್ ನಲ್ಲಿ ಸೋಲುಂಡಿತ್ತು. ಕೊಹ್ಲಿಯ ನಾಯಕತ್ವದಲ್ಲಿ ಭಾರತ ಕಳೆದ ವರ್ಷ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿತ್ತು, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈ ಚೆಲ್ಲಿತ್ತು.
SPECIAL: ಹೇಗಿರಬೇಕು ನಿಮ್ಮ ಪಾಸ್ ವರ್ಡ್…? ಇಲ್ಲಿದೆ ಇಂಟರ್ನೆಟ್ ಬಳಕೆದಾರರಿಗೆ ಬಲು ಉಪಯುಕ್ತ ಮಾಹಿತಿ
ಇದರ ನಂತರ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಆಡಿದ ಮೊದಲ ಹಗಲು ರಾತ್ರಿ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಎಂಟು ವಿಕೆಟ್‌ಗಳಿಂದ ಸೋತಿದೆ. ಇದರ ನಂತರ ಕೊಹ್ಲಿ ಭಾರತಕ್ಕೆ ವಾಪಸ್ ಆಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡದ ನೇತೃತ್ವ ವಹಿಸಿಕೊಂಡಿದ್ದರು. ಮೂರು ಟೆಸ್ಟ್ ಪಂದ್ಯಗಳಲ್ಲಿ ರಹಾನೆ ನಾಯಕತ್ವ ವಹಿಸಿದ್ದರು. ಇದರಲ್ಲಿ ಭಾರತ ಮೆಲ್ಬೋರ್ನ್ ಟೆಸ್ಟ್ ಗೆದ್ದಿತ್ತು. ಸಿಡ್ನಿ ಟೆಸ್ಟ್ ಡ್ರಾ ಆಗಿತ್ತು. ನಾಲ್ಕನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು.
ಇಂಗ್ಲೆಂಡ್ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಕೊಹ್ಲಿ ವಾಪಸ್ ಆಗಿದ್ದಾರೆ. ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಟೀಂ ಇಂಡಿಯಾ ಸೋಲುಂಡಿದೆ.