ಇಂಗ್ಲೆಂಡ್ ವಿರುದ್ಧ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದೆ. ಮಾರ್ಚ್ 23 ರಿಂದ ಪ್ರಾರಂಭವಾಗುವ ಏಕದಿನ ಪಂದ್ಯ ಮಾರ್ಚ್ 28ಕ್ಕೆ ಕೊನೆಗೊಳ್ಳಲಿದೆ. ಸರಣಿಯ ಎಲ್ಲಾ ಮೂರು ಪಂದ್ಯಗಳು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಸರಣಿಗೆ ಭಾರತೀಯ ತಂಡದಲ್ಲಿ ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ, ಕ್ರುನಾಲ್ ಪಾಂಡ್ಯ ಮತ್ತು ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ, ಅದ್ಬುತ ಪ್ರದರ್ಶನ ನೀಡಿ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಕ್ರುನಾಲ್ ಪಾಂಡ್ಯ ಟಿ 20 ಪಂದ್ಯಗಳನ್ನು ಆಡಿದ್ದರು. ಮನೀಶ್ ಪಾಂಡೆ ಏಕದಿನ ತಂಡದಿಂದ ಹೊರ ಬಿದ್ದಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಕ್ರುನಾಲ್ ಪಾಂಡ್ಯ ಅಜೇಯ ಎರಡು ಶತಕಗಳನ್ನು ಮತ್ತು ಎರಡು ಅರ್ಧಶತಕಗಳನ್ನು ಗಳಿಸಿದ್ದರು. ಆದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪೃಥ್ವಿ ಶಾ ಮತ್ತು ದೇವದತ್ ಪಡಿಕಲ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಪಂದ್ಯಾವಳಿಯಲ್ಲಿ ಪೃಥ್ವಿ ಶಾ 827 ಮತ್ತು ಪಡಿಕಲ್ 737 ರನ್ ಗಳಿಸಿದ್ದರು. ಇದಲ್ಲದೆ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶುಭ್ ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಲ್. ರಾಹುಲ್, ಟಿ. ನಟರಾಜನ್, ಭುವನೇಶ್ವರ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಶಾರ್ದುಲ್ ಠಾಕೂರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 23ರಂದು ನಡೆಯಲಿದೆ. ಎರಡನೇ ಏಕದಿನ ಮಾರ್ಚ್ 26ರಂದು ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 28ರಂದು ನಡೆಯಲಿದೆ.