ಕೊಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಚೊಚ್ಚಲ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿರುವ ನಾಯಕ ರೋಹಿತ್ ಶರ್ಮ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಮೂರನೇ ಪಂದ್ಯದಲ್ಲಿ ಹೊಸ ಆಟಗಾರರಿಗೆ ಅವಕಾಶ ನೀಡಲಿದ್ದಾರೆ.
ಮುಂದಿನ ವಾರದಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಿಷಬ್ ಪಂತ್, ಅಶ್ವಿನ್, ಮೊಹಮ್ಮದ್ ಸಿರಾಜ್, ಕೆ.ಎಲ್. ರಾಹುಲ್ ಅವರಿಗೆ ವಿಶ್ರಾಂತಿ ನೀಡಿ ಮೂರನೇ ಪಂದ್ಯದಲ್ಲಿ ಯುವ ಆಟಗಾರರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
ಈ ಪಂದ್ಯದಲ್ಲಿ ಋತುರಾಜ್ ಗಾಯಕವಾಡ್ ಪಾದಾರ್ಪಣೆ ಮಾಡುವ ಅವಕಾಶ ಸಿಗಬಹುದು. ಇಲ್ಲವೇ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಬಹುದು. ಯುವ ಆಟಗಾರರಿಗೆ ಅವಕಾಶ ನೀಡುವ ಬಗ್ಗೆ ರೋಹಿತ್ ಶರ್ಮ ಈಗಾಗಲೇ ಸುಳಿವು ನೀಡಿದ್ದಾರೆ. ಇವತ್ತು ಸಂಜೆ 7 ಗಂಟೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಕೊನೆಯ ಟಿ20 ಪಂದ್ಯ ಗೆಲ್ಲಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 20 ಸಲ ಮುಖಾಮುಖಿಯಾಗಿದ್ದು, ಭಾರತ 10, ನ್ಯೂಜಿಲೆಂಡ್ 9 ಪಂದ್ಯಗಳಲ್ಲಿ ಗೆದ್ದಿದ್ದು, 1 ಪಂದ್ಯ ಫಲಿತಾಂಶ ಬಂದಿಲ್ಲ.