ದುಬೈನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸಿದ್ದು ಇದರೊಂದಿಗೆ ಭಾರತದ ಸೆಮಿಫೈನಲ್ ಕನಸು ಜೀವಂತವಾಗಿದೆ.
ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ ಸಿಕ್ಕಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಸಾಧ್ಯತೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕೆಎಲ್ ರಾಹುಲ್ 19 ಎಸೆತಗಳಲ್ಲಿ 50 ರನ್ ಗಳಿಸಿದ್ದು, ರೋಹಿತ್ 16 ಎಸೆತಗಳಲ್ಲಿ 30 ರನ್ ಗಳಿಸಿದ್ದಾರೆ ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ 3, ಬೂಮ್ರಾ 2 ವಿಕೆಟ್ ಪಡೆದಿದ್ದಾರೆ.
ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ 3 ನೇ ಸ್ಥಾನಕ್ಕೇರಿದೆ. ನ್ಯೂಜಿಲೆಂಡ್, ಆಫ್ಘಾನಿಸ್ತಾನಕ್ಕಿಂತ ಭಾರತದ ನೆಟ್ ರನ್ ರೇಟ್ ಉತ್ತಮವಾಗಿದೆ.
ಸ್ಕಾಟ್ಲೆಂಡ್ 85 /10(17.4), ಭಾರತ 89/2(6.3)