ಕೊಲ್ಕೊತ್ತಾ: ಏಕದಿನ ಸರಣಿ ಕ್ಲೀನ್ ಸ್ವೀಪ್ ನಂತರ ಮತ್ತೊಂದು ವೈಟ್ ವಾಷ್ ಗೆ ಅಖಾಡ ಸಿದ್ಧವಾಗಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೂರನೇ ಪಂದ್ಯ ನಡೆಯಲಿದೆ.
ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ತಂಡವನ್ನು ಕಾರ್ಯತಂತ್ರ ರೂಪಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ವಿರಾಟ್ ಕೊಹ್ಲಿ, ರಿಷಬ್ ಪಂತ್ ಅವರಿಗೆ ರಜೆ ನೀಡಿದ್ದು, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕವಾಡ್ ಅವರು ಆಡುವ 11 ರ ಬಳಗ ಸೇರಿಕೊಳ್ಳುವ ಸಾಧ್ಯತೆ ಇದೆ.
ಉಭಯ ತಂಡಗಳು 19 ಬಾರಿ ಮುಖಾಮುಖಿಯಾಗಿದ್ದು, ಭಾರತ 11 ಸಲ, ವೆಸ್ಟ್ ಇಂಡೀಸ್ 6 ಪಂದ್ಯಗಳಲ್ಲಿ ಜಯಗಳಿಸಿದೆ. ಒಂದು ಪಂದ್ಯದ ಫಲಿತಾಂಶ ಬಂದಿಲ್ಲ.