alex Certify WorldCup 2011: ಟೀಂ ಇಂಡಿಯಾ ಏಕದಿನ ವಿಶ್ವಕಪ್ ಜಯಿಸಿ 10 ವರ್ಷ, ಗೆಲುವಿನ ಕ್ಷಣಗಳ ಸ್ಮರಣೆಯೊಂದಿಗೆ ಸಂಭ್ರಮಾಚರಣೆ – ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WorldCup 2011: ಟೀಂ ಇಂಡಿಯಾ ಏಕದಿನ ವಿಶ್ವಕಪ್ ಜಯಿಸಿ 10 ವರ್ಷ, ಗೆಲುವಿನ ಕ್ಷಣಗಳ ಸ್ಮರಣೆಯೊಂದಿಗೆ ಸಂಭ್ರಮಾಚರಣೆ – ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರ

ನೀವು ಕ್ರಿಕೆಟ್ ಪ್ರಿಯರಾಗಿದ್ದರೆ ಈ ದಿನವನ್ನು ಮರೆಯಲು ಸಾಧ್ಯವೇ ಇಲ್ಲ. ಏಕೆಂದರೆ 2011 ರಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಕ್ರಿಕೆಟ್ ದಿನ ಇದಾಗಿದೆ.

ಈ ಸಂಭ್ರಮವನ್ನು 10 ವರ್ಷಗಳ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರು ತಡರಾತ್ರಿಯಿಂದ ಭಾರತ ವಿಶ್ವಕಪ್ ಗೆದ್ದ ಕ್ಷಣವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟರ್ನಲ್ಲಿಯು # WorldCup2011 ಟ್ರೆಂಡ್ ಆಗಿದೆ.

.ಅನೇಕ ಕ್ರಿಕೆಟ್ ಅಭಿಮಾನಿಗಳು ಭಾರತ ತಂಡ ವಿಶ್ವಕಪ್ ಜಯಿಸಿದ ಸಂತೋಷವನ್ನು ಸಂಭ್ರಮಿಸುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ತಮ್ಮ ನೆನಪುಗಳನ್ನು ಹಂಚಿಕೊಳ್ಳತೊಡಗಿದ್ದಾರೆ. ಅಂದಿನ ಸಂಭ್ರಮದ ಕ್ಷಣಗಳನ್ನು ಮೆಲುಕು ಹಾಕುತ್ತಿದ್ದಾರೆ.

ಎಂಎಸ್ ಧೋನಿ ಮತ್ತು ಗೌತಮ್ ಗಂಭೀರ್ ಹಾಗೂ ಜಹೀರ್ ಖಾನ್ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಕಾರಣರಾಗಿದ್ದಾರೆ. ಯುವರಾಜ್ ಸಿಂಗ್ ಟೂರ್ನಿಯಲ್ಲಿ ಉತ್ತಮವಾಗಿ ಆಡಿ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಸಾಧನೆ ಮಾಡಿದ್ದರು ಎಂದು ಕೊಂಡಾಲಾಗಿದೆ.

2011 ರ ವಿಶ್ವಕಪ್ ಫೈನಲ್ ನಲ್ಲಿ ಶ್ರೀಲಂಕಾ 274 ರನ್ ಗಳಿಸಿದ್ದು, ಭಾರತ ತಂಡ ಗೆಲುವಿನ ಗುರಿ ಬೆನ್ನತ್ತಿದಾಗ ಉತ್ತಮ ಆರಂಭ ಪಡೆದಿರಲಿಲ್ಲ. 31 ರನ್ ಎರಡು ವಿಕೆಟ್ ಕಳೆದುಕೊಂಡಿತ್ತು. ಸೆಹ್ವಾಗ್ ಮತ್ತು ಸಚಿನ್ ಪೆವಿಲಿಯನ್ ಗೆ ಮರಳಿದಾಗ ಗೌತಮ್ ಗಂಭೀರ್ ಮತ್ತು ಎಂಎಸ್ ಧೋನಿ ಜೊತೆಯಾಗಿ 109 ರನ್ ಗಳಿಸಿದ್ದರು. 97 ರನ್ ಗಳಿಸಿದ ಗಂಭೀರ್ ಔಟಾದ ನಂತರ ಎಂಎಸ್ ಧೋನಿಯೊಂದಿಗೆ ಯುವರಾಜ್ ಸಿಂಗ್ ಜೋಡಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ವಿಶ್ವಕಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

https://twitter.com/Indian_kop/status/1377717907803664386

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...