ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಗೊಂಡು T20 ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾಗೆ ಏಷ್ಯಾ ಕಪ್‌ನಲ್ಲಿ ಸೂಪರ್ 4 ಅಭಿಯಾನದ ಮೊದಲು ದೊಡ್ಡ ಹೊಡೆತ ಬಿದ್ದಂತಾಗಿದೆ.
ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್‌ನಲ್ಲಿ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಹೆಸರಿಸಿದೆ. ಜಡೇಜಾ ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ.
ಬದಲಿ ಆಟಗಾರ ಅಕ್ಸರ್ ಪಟೇಲ್ ಅವರನ್ನು ಈ ಹಿಂದೆ ತಂಡದಲ್ಲಿ ಸ್ಟ್ಯಾಂಡ್ ಬೈಗಳಲ್ಲಿ ಒಬ್ಬರಾಗಿ ಹೆಸರಿಸಲಾಗಿತ್ತು. ಅವರು ಶೀಘ್ರದಲ್ಲೇ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏಷ್ಯಾ ಕಪ್ 2022 ರ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳ ಗೆಲುವಿನಲ್ಲಿ ಸ್ಟಾರ್ ಆಲ್ ರೌಂಡರ್ ರೋಹಿತ್ ಶರ್ಮಾ ನೇತೃತ್ವದ ತಂಡದ ಎರಡನೇ ಅತಿ ಹೆಚ್ಚು ಸ್ಕೋರರ್ ಆಗಿದ್ದರಿಂದ ಜಡೇಜಾ ಅವರ ಗಾಯವು ಭಾರತೀಯ ತಂಡಕ್ಕೆ ದೊಡ್ಡ ಹೊಡೆತವಾಗಿದೆ.
ಜಡೇಜಾ ಅವರು ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಹಿಂದಿಕ್ಕಿ ಏಷ್ಯಾಕಪ್ ಟೂರ್ನಿಯ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಜಡೇಜಾ ಆರು ಏಷ್ಯಾ ಕಪ್ ಪಂದ್ಯಾವಳಿಗಳಲ್ಲಿ 23 ವಿಕೆಟ್ ಗಳನ್ನು ಪಡೆದಿದ್ದಾರೆ.