ಈ ಬಾರಿಯ ಐಪಿಎಲ್ ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಅಭಿಮಾನಿಗಳು ಕ್ಷಣಗಣನೆ ಮಾಡುತ್ತಿದ್ದಾರೆ. ಇದರ ಮಧ್ಯೆ ಮುಂಬೈ ಇಂಡಿಯನ್ಸ್ ಹೊಸ ರೆಕಾರ್ಡ್ ಒಂದನ್ನು ಮಾಡಿದೆ.
ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದು, 5 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ಇನ್ಸ್ಟಾಗ್ರಾಂನಲ್ಲಿ ರೆಕಾರ್ಡ್ ಮಾಡಿದೆ.
ಮುಂಬೈ ಇಂಡಿಯನ್ಸ್ 5 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಮೊದಲನೇ ಸ್ಥಾನದಲ್ಲಿದೆ. ನಂತರ ಚೆನ್ನೈ ಸೂಪರ್ ಕಿಂಗ್ಸ್ 4.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಮೂರನೇ ಸ್ಥಾನದಲ್ಲಿ ಆರ್.ಸಿ.ಬಿ. 4.1 ಮಿಲಿಯನ್ ಫಾಲೋವರ್ಸ್ ಗಳಿಸಿದೆ.