13ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಮನೋರಂಜನೆ ನೀಡುತ್ತಿದೆ. ಸೋಲು ಗೆಲುವು ಇದ್ದದ್ದೇ. ಆದರೆ ಆಟದ ಮನೋರಂಜನೆ ಸಿಗುತ್ತಿರುವುದು ಕ್ರಿಕೆಟ್ ಪ್ರಿಯರಿಗೆ ಖುಷಿ ತಂದಿದೆ. ಪ್ರತಿ ನಿತ್ಯ ಪಂದ್ಯಗಳು ಸರಾಗವಾಗಿ ಸಾಗುತ್ತಿವೆ. ನಿನ್ನೆ ಕೂಡ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ ಇತ್ತು.
ಈ 2 ಟೀಮ್ಗಳ ನಡುವೆ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ಸೋಲು ಅನುಭವಿಸಿತು. ಸೋಲುಂಡ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.
ಹೌದು, ರಾಜಸ್ಥಾನ್ ರಾಯಲ್ಸ್ ಟೀಮ್ನ ನಾಯಕ ಸ್ಟೀವ್ ಸ್ಮಿತ್ಗೆ ದಂಡ ವಿಧಿಸಲಾಗಿದೆ. ಪಂದ್ಯದ ನಿಯಮದ ಪ್ರಕಾರ ನಿಧಾನಗತಿಯಲ್ಲಿ ಬೌಲಿಂಗ್ ಮಾಡುವಂತಿಲ್ಲ. ಆದರೆ ನಿನ್ನೆ ನಡೆದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದರಿಂದ ಸ್ಮಿತ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.